ಕುಂದಾಪುರ : ಸೌಜನ್ಯ ಪ್ರಕರಣ ಮುಂದಿಟ್ಟುಕೊಂಡು ಧಾರ್ಮಿಕ ಪುಣ್ಯ ಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಮಾಡುತ್ತಿರುವ ಅಪಪ್ರಚಾರ ಖಂಡನೀಯ. ಇಂತಹ ಆಧಾರ ರಹಿತವಾದ ಅಪಪ್ರಚಾರದಲ್ಲಿ ತೊಡಗಿಕೊಂಡ ವ್ಯಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಕುಂದಾಪುರ ಶಾಸಕ ಎ ಕಿರಣ್ ಕುಮಾರ್‌ಕೊಡ್ಡಿ ಆಗ್ರಹಿಸಿದ್ದಾರೆ.
ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನವನ್ನು ಖಂಡಿಸಿ ಗುರುವಾರ ಇಲ್ಲಿನ ಶಾಸ್ತ್ರೀ ವೃತ್ತದ ಬಳಿ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಕುಂದಾಪುರ ನೇತೃತ್ವದಲ್ಲಿ ನಡೆದ ಬೃಹತ್ ಜನಾಗ್ರಹ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಕಸಪಾ ಸ್ಥಾಪಕಾಧ್ಯಕ್ಷ ಎ.ಎಸ್.ಎನ್ ಹೆಬ್ಬಾರ್, ಜನಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಹೆಬ್ರಿ, ಧಾರ್ಮಿಕ ಮುಂದಾಳು ಮಲ್ಯಾಡಿ ಶಿವರಾಮ್ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಪ್ರಸಂಗಕರ್ತ ಬಸವರಾಜ್ ಶೆಟ್ಟಿಗಾರ್, ಸಾಮಾಜಿಕ ಹೋರಾಟಗಾರ ಶಂಕರ್‌ಅಂಕದಕಟ್ಟೆ ಮತ್ತಿತರರು ಮಾತನಾಡಿದರು.
ಪುರಸಭೆಯ ಅಧ್ಯಕ್ಷ ಮೋಹನ್‌ದಾಸ್ ಶೆಣೈ, ಪ್ರಮುಖರಾದ ಸುಬ್ರಹ್ಮಣ್ಯ ಶೆಟ್ಟಿ, ಯುಎಸ್ ಶೆಣೈ, ರಥಶಿಲ್ಪಿ ರಾಜಗೋಪಾಲಾಚಾರ್ಯ, ಅತುಲ್ ಕುಮಾರ್, ಅಶೋಕ್ ಕುಮಾರ್‌ಕೊಡ್ಡಿ, ಅಶೋಕ್ ಕೆರೆಕಟ್ಟೆ, ಮಂಜು ಬಿಲ್ಲವ, ಪ್ರದೀಪ್ ಶೆಟ್ಟಿ, ಬಶೀರ್‌ಸಾಹೇಬ್ ಪ್ಲೆಸೆಂಟ್, ಸುರೇಶ್ ಶೆಟ್ಟಿ ಗೋಪಾಡಿ, ವಕೀಲರಾದ ಉಮೇಶ್ ಶೆಟ್ಟಿ ಶಾನ್ಗಟ್ಟು, ರಾಜೇಶ್ ಕಾವೇರಿ ವೇದಿಕೆಯಲ್ಲಿದ್ದರು.
ಕುಂದಾಪುರ ಗ್ರಾಮಾಂತರ ಠಾಣೆಯ ವೃತ್ತನಿರೀಕ್ಷಕ ಜಯರಾಮ್ ಗೌಡ, ಕುಂದಾಪುರ ನಗರ ಠಾಣೆಯ ಪಿಎಸ್‌ಐ ನಂಜಾ ನಾಯ್ಕ, ಸಂಚಾರ ಠಾಣೆಯ ಪಿಎಸ್‌ಐ ಸುದರ್ಶನ್ ಹಾಗೂ ಸಿಬ್ಬಂದಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದರು.

