ಬೆಂಗಳೂರು: ಕುಂದಾಪುರ ನಗರದಲ್ಲಿ ಹಲವಾರು ವರ್ಷಗಳ ಹಿಂದೆ ಆರಂಭಗೊಂಡ ಒಳ ಚರಂಡಿ (ಯುಜಿಡಿ) ಕಾಮಗಾರಿ ಪೂರ್ಣಗೊಳ್ಳದೆ. ಸಾಕಷ್ಟು ಸಮಸ್ಯೆ ಉಂಟಾಗುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಬೆಂಗಳೂರಿನಲ್ಲಿ ನಗರ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾದ ದೀಪಾ ಚೋಳನ್ ಭೇಟಿ ಮಾಡಿ ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಪರಿಹರಿಸುವಂತೆ ಮನವಿ ನೀಡಲಾಯಿತು. ಯೋಜನೆಯ ಸಮಸ್ಯೆಯ ಬಗ್ಗೆ ಹಾಗೂ ಪರಿಹಾರದ ಕ್ರಮದ ಬಗ್ಗೆ ವಿವರವಾಗಿ ಚರ್ಚಿಸಿ ಜರೂರು ಪರಿಹಾರ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು.
Categories
ಒಳಚರಂಡಿ ಯೋಜನೆ ಪೂರ್ಣಗೊಳಿಕೆಗೆ : ಮನವಿ ಸಲ್ಲಿಸಿದ ಕುಂದಾಪುರ ಶಾಸಕ