ಕುಂದಾಪುರ : ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಾಳವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಕ್ವಾಡಿ ಪರಿಸರದಲ್ಲಿ ನೆರೆ ಬಂದು ಕೃಷಿ ಸಂಪೂರ್ಣವಾಗಿ ಜಲಾವೃತವಾದ ಪ್ರದೇಶಕ್ಕೆ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಸೂಕ್ತ ಪರಿಹಾರದ ಭರವಸೆಯನ್ನು ನೀಡಿದರು.ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಪಕ್ಷದ ಹಿರಿಯ ಮುಖಂಡರಾದ ವಿ.ಕೆ.ಶೆಟ್ಟಿ, ರಘುರಾಮ್ ಶೆಟ್ಟಿ, ಗ್ರಾಮ ಪಂಚಾಯತಿನ ಸದಸ್ಯರಾದ, ರವಿರಾಜ್ ಶೆಟ್ಟಿ, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು