ಕೊಲ್ಲೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಿನ್ನೆ ಕೊಲ್ಲೂರು ಶ್ರೀ ಮೂಕಾಂಬಿಕ ದೇಗುಲಕ್ಕೆ ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು

ದೇಗುಲದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ಸ್ವಾಗತಿಸಿ ಗೌರವಿಸಿದರು ದೇಗುಲದ ಕಾರ್ಯ ನಿರ್ವಾಹಣಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಶೆಟ್ಟಿ ವ್ಯವಸ್ಥಾಪನ ಸಮಿತಿ ಸದಸ್ಯ ಹಾಗೂ ಅರ್ಚಕ ರಾಮಚಂದ್ರ ಅಡಿಗ
ಮಾಜಿ ಸದಸ್ಯ ರಮೇಶ್ ಗಾಣಿಗ ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮೊಳಹಳ್ಳಿ ದಿನೇಶ್ ಹೆಗ್ಡೆ ಬೈಂದೂರು ಕಾಂಗ್ರೇಸ್ ಮುಖಂಡರಾದ ರಾಜು ಎಸ್ ಪೂಜಾರಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಜಡ್ಕಲ್ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಆರ್ ಬೈಂದೂರು ತಹಸಿಲ್ದಾರ್ ಶ್ರೀಕಾಂತ್ ಹೆಗಡೆ ಡಿ ವೈ ಎಸ್ ಪಿ ಬೆಳ್ಳಿಯಪ್ಪ ಮುಂತಾದವರು ಉಪಸ್ಥಿತರಿದ್ದರು


