ಕೊಲ್ಲೂರು : ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು
ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯಪಾಲರು ಮಂಗಳವಾರ ಬೆಳಿಗ್ಗೆ ಉಡುಪಿಯಿಂದ ಕುಂದಾಪುರ ಮಾರ್ಗವಾಗಿ ಕೊಲ್ಲೂರು ದೇವಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ರಾಜ್ಯಪಾಲರಿಗೆ ದೇವಿಯ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್ ಆರ್ ಬೈಂದೂರು ತಸಿಲ್ದಾರ್ ಶ್ರೀಕಾಂತ್ ಕೆ ಹೆಗಡೆ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಕೊಲ್ಲೂರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ
ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಸಮಿತಿಯ ಸದಸ್ಯರಾದ ರಾಮಚಂದ್ರ ಅಡಿಗ ಜಯಾನಂದ ಹೋಬಳಿದಾರ್ ಡಾ.ಅತುಲ್ ಕುಮಾರ್ ಶೆಟ್ಟಿ ಗೋಪಾಲಕೃಷ್ಣ ಅಡಿಗ ಸಂಧ್ಯಾ ರಮೇಶ್ ರತ್ನ ರಮೇಶ್ ಕುಂದರ್ ಶೇಖರ್ ಪೂಜಾರಿ ಪಸ್ಥಿತರಿದ್ದರು ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು

