ಕುಂದಾಪುರ : ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂದಿನ 14 ಗಂಟೆಗಳ ಕಾಲ ಹಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಹಲವು ಭಾಗಗಳಲ್ಲಿ ಮಣ್ಣು ಕುಸಿತವಾಗಿದ್ದು, ರೈಲು ಸಂಚಾರ ರದ್ದುಗೊಂಡಿದೆ. ಮಂಗಳೂರು ಎಕ್ ಪ್ರೆಸ್, ಕೊಂಕಣ ಕನ್ಯಾ ಎಕ್ಸ್‌ಪ್ರೆಸ್, ಟ್ಯಟರಿ ಎಕ್ಸ್‌ಪ್ರೆಸ್, ಜನ್ಮ ಶತಾಬಿ ಎಕ್ ಪ್ರೆಸ್, ದಿವಾ ಸಾವಂತವಾಡಿ ಎಕ್ಸ್‌ಪ್ರೆಸ್, ಸಾವಂತವಾಡಿ ಮಡಗಾಂವ್ ಪ್ಯಾಸೆಂಜರ್ ರೈಲು ಸಂಚಾರ ರದ್ದಾಗಿದೆ.
ಕರಾವಳಿ ಭಾಗದ 12134 ಸೂಪರ್ ಎಕ್ಸ್‌ಪ್ರೆಸ್, ಛತ್ರಪತಿ ಶಿವಾಜಿ ಮುಂಬೈ ಟರ್ಮಿನಲ್ ರೈಲು ಸಂಚಾರ ಹಾಗೂ 12620 ಮತ್‌ಸ್ಯಗಂಧ ಮಂಗಳೂರು-ಮುಂಬೈ ರೈಲು ಸಂಚಾರ ರದ್ದಾಗಿದೆ. ಇತ್ತೀಚೆಗಷ್ಟೇ ಗೋವಾದ ಕೊಂಕಣ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಹಲವು ರೈಲುಗಳ ಸಂಚಾರ ವ್ಯತ್ಯಯವಾಗಿದೆ
ಈ ಮಧ್ಯೆ ಕರ್ನಾಟಕದ ಕರಾವಳಿ ಭಾಗದಿಂದ ಘಾಟ್ ಪ್ರವಾಸೋದ್ಯಮಕ್ಕೆ ಭೇಟಿ ನೀಡುವಾಗ ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.