ಕೋಟ : ಕೊಲೆ ಬೆದರಿಕೆ ಮೂವರು ಆರೋಪಿಗಳ ಬಂಧನ

by Kundapur Xpress
Spread the love

ಕೋಟ : ಕೊಲೆ ಬೆದರಿಕೆ ಮೂವರು ಆರೋಪಿಗಳ ಬಂಧನ

ಉಡುಪಿ: ಮನೆಯ ಅಂಗಳದಲ್ಲಿ ಸರ್ಕಾರಿ ಅಕ್ಕಿ ಚೀಲಗಳನ್ನು ಇಟ್ಟಿರುವ ವಿಚಾರಕ್ಕೆ ಸಂಬಂಧಿಸಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಾಗೇಂದ್ರ ಪುತ್ರನ್‌ ಅಲಿಯಾಸ್ ನಾಗೇಂದ್ರ ಕೆ.ಕೆ. ಹಾಗೂ ಪಿ. ಸುಮಂತ್ ಕುಂದರ್ ಅವರನ್ನು ಸೆಪ್ಟೆಂಬರ್ 2ರಂದು ಮೈಸೂರಿನಲ್ಲಿ ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ಸಚಿನ್ ಶ್ರೀಯಾನ್‌ನನ್ನು ಸೆಪ್ಟೆಂಬರ್ 1ರಂದು ಬಂಧಿಸಲಾಗಿತ್ತು.

ಬಂಧಿತ ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 

Related Articles

error: Content is protected !!