ಕೋಟ: ಇಲ್ಲಿನ ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದ ವಾರ್ಷಿಕ ಜಾತ್ರೋತ್ಸವ ಇದೇ ಬರುವ ಜನವರಿ 9 ರಿಂದ11ರ ತನಕ ನಡೆಯಲಿದ್ದು ಈ ಹಿನ್ನಲ್ಲೆಯಲ್ಲಿ ಗುರುವಾರ ಶ್ರೀ ದೇಗುಲದಲ್ಲಿ ಜಾತ್ರೋತ್ಸವ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪಕ ಸಮಿತಿ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಸುಧಾ ಎ ಪೂಜಾರಿ,ಜ್ಯೋತಿ ದೇವದಾಸ್ ಕಾಂಚನ್,ಶಿವ ಪೂಜಾರಿ,ರತನ್ ಐತಾಳ್,ಚಂದ್ರ ಆಚಾರ್, ಸುಬ್ರಾಯ ಜೋಗಿ,ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ,ಸ್ಥಳೀಯರು ಮತ್ತಿತರರು ಉಪಸ್ಥಿತರಿದ್ದರು.