Home » ಪ್ರಕೃತಿಯ ಮೇಲೆ ದೌರ್ಜನ್ಯ ಸಲ್ಲ- ಗೀತಾ ಕಾರ್ವಿ
 

ಪ್ರಕೃತಿಯ ಮೇಲೆ ದೌರ್ಜನ್ಯ ಸಲ್ಲ- ಗೀತಾ ಕಾರ್ವಿ

ಪಂಚವರ್ಣದ 253ನೇ ಪರಿಸರಸ್ನೇಹಿ ಅಭಿಯಾನ

by Kundapur Xpress
Spread the love

ಕೋಟ : ಪ್ರಕೃತಿಯ ಮೇಲೆ ನಿರಂತರ ದೌರ್ಜನ್ಯ ಸಲ್ಲ ಬದಲಾಗಿ ಪ್ರಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕಿದೆ ಎಂದು ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ವಿ ಹೇಳಿದರು.
ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಕೋಡಿ ಗ್ರಾಮಪಂಚಾಯತ್ ,ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಇವರ ಸಹಯೋಗದೊಂದಿಗೆ ಪರಿಸರಸ್ನೇಹಿ 253 ನೇ ಭಾನುವಾರದ ಅಭಿಯಾನದ ಸಲುವಾಗಿ ಸಮಾಜ ಸೇವಕ ಆನಂದ್ ಸಿ ಕುಂದರ್ ಹುಟ್ಟುಹಬ್ಬದ ಅಂಗವಾಗಿ ಕೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಬೀಚ್ ಕ್ಲಿನಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸಮುದ್ರದಲ್ಲಿ ರಾಶಿ ರಾಶಿ ತ್ಯಾಜ್ಯಗಳು ದಡಕ್ಕಪ್ಪಳಿಸುತ್ತಿದೆ ಇದರ ದುಷ್ಪರಿಣಾಮ ಮುಂದಿನ ದಿನಗಳಲ್ಲಿ ನಾವುಗಳು ಅನುಭವಿಸಬೇಕಿದೆ ಈ ಬಗ್ಗೆ ಹಳ್ಳ,ತೊರೆ,ನದಿ ,ಸಮುದ್ರುಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ಎಸೆಯದಂತೆ ಮನವಿ ಮಾಡಿದರು.
ಕೋಡಿ ಗ್ರಾಮಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ ಪಿ,ಕೋಡಿ ಹೊಸಬೇಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನ ಎಲ್ ಕುಂದರ್,ಸಮನ್ವನ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದೀಪಾ ಕಾರ್ವಿ,ಸದಸ್ಯೆ ಸುಜಾತ,ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಶೋಭಾ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಂಚವರ್ಣ ಮದ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ನಿರ್ವಸಿ ಸಂಯೋಜಿಸಿದರು

 

Related Articles

error: Content is protected !!