ಕೋಟ : ವಿವೇಕ ವಿದ್ಯಾ ಸಂಸ್ಥೆ ಕೋಟ ಇದರ ವಾರ್ಷಿಕ ಕ್ರೀಡಾ ದಿನಾಚರಣೆ ವಿವೇಕ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ ಶೆಟ್ಟಿ ಕ್ರೀಡೋತ್ಸವವನ್ನು ಉದ್ಘಾಟಿಸಿದರು.
ಸಭೆಯನ್ನುದ್ದೇಶಿಸಿ ಪ್ರೋ. ಕೆ. ಉಮೇಶ ಶೆಟ್ಟಿಯವರು ಮಾತನಾಡಿ, ಕ್ರೀಡೆಯು ನಮ್ಮ ಮನಸ್ಸನ್ನು ಹಗುರಗೊಳಿಸುತ್ತದೆ ಮತ್ತು ಜೀವನದಲ್ಲಿ ಸವಾಲುಗಳನ್ನು ಎದುರಿಸಲು ತರಬೇತಿ ನೀಡುತ್ತದೆ. ವಿದ್ಯಾರ್ಥಿಗಳು ಕಾಲೇಜಿನ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಿ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ಓದುವಿನ ಜೊತೆ ಪಾಠ್ಯೇತರ ಜಟುವಟಿಕೆಗಳಲ್ಲಿ ಕೂಡ ತೊಡಗಿಕೊಳ್ಳಬೇಕೆಂದು ಹೇಳಿದರು. ಹಾಗೇ ವಿವೇಕದಲ್ಲಿ ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಕೋಟ ವಿದ್ಯಾಸಂಘದ ಕಾರ್ಯದರ್ಶಿ ಎಂ. ರಾಮದೇವ ಐತಾಳ ಉಪಸ್ಥಿತರಿದ್ದು ಕ್ರೀಡೆಯಲ್ಲಿಎಲ್ಲರೂ ಭಾಗವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು ಇದೇ ಸಂದರ್ಭದಲ್ಲಿ ಸಂಸ್ಥೆಯ ಕ್ರೀಡಾಂಗಣದ ದುರಸ್ತಿ ಕಾರ್ಯದಲ್ಲಿ ಸಹಕರಿಸಿದ ಸುಬ್ರಾಯ ಆಚಾರ್ ಇವರನ್ನು ಸನ್ಮಾನಿಸಲಾಯಿತು.
ಇತ್ತೀಚೆಗೆ ಬಿಜಾಪುರದ ತಾಳಿಕೊಟೆಯಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿ ಶೋಭಿತ್ನನ್ನು ಪುರಸ್ಕರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ವಸಂತ ಶೆಟ್ಟಿ, ಹಿರಿಯ ಸಹಶಿಕ್ಷಕ ವೆಂಕಟೇಶ ಉಡುಪ, ಮುಖ್ಯೋಪಾಧ್ಯಾಯರಾದ ಪ್ರೀತಿರೇಖಾ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ ನಾವಡರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಕೆ. ಜಗದೀಶ ಹೊಳ್ಳ ಧನ್ಯವಾದ ಸಮರ್ಪಣೆಗೈದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಮತಾ, ಗಣೇಶ ಶೆಟ್ಟಿ, ವಿಶ್ವನಾಥ ನಾಯಕ್, ರಕ್ಷತ್ಕ್ರೀಡಾಕೂಟದ ನಿರ್ವಹಣೆಯನ್ನು ನಿರ್ವಹಿಸಿದ್ದರು. ನರೇಂದ್ರ ಕುಮಾರ್, ರತಿ ಬಾÊ, ಶಿವಪ್ರಸಾದ್ ಶೆಟ್ಟಿಗಾರ್ ಹಾಗೂ ಚಂದ್ರಶೇಖರ್ ಎಚ್.ಎಸ್. ಕಾರ್ಯಕ್ರಮ ನಿರ್ವಹಿಸಿದ್ದರು.