ಕೋಟ: ಕೋಟತಟ್ಟು ಗ್ರಾಮ ಪಂಚಾಯತ್‍ನ 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋಗದ ಅನುದಾನ ಬಳಕೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಜು.12ರ ಶುಕ್ರವಾರ ಕೋಟತಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ತಾಲೂಕು ಪಂಚಾಯತ್ ಬ್ರಹ್ಮಾವರದ ಯೋಜನಾಧಿಕಾರಿ ಸಂದೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ತಾಲೂಕು ವ್ಯವಸ್ಥಾಪಕರಾದ ಹುಸೇನ್ ಸಾಬದಾ. ಕರನಾಚಿ ಅವರು ಉದ್ಯೋಗ ಖಾತ್ರಿ ಯೋಜನೆ ಹಾಗೂ 15ನೇ ಹಣಕಾಸು ಆಯೋದ ಬಗ್ಗೆ ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಶ್ರೀಮತಿ ಸರಸ್ವತಿ, ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ಅಶ್ವಿನಿ, ವಿದ್ಯಾ ಪಿ, ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳು, ಸಾರ್ವಜನಿಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೋಟತಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅವರು ಗ್ರಾಮಸಭೆ ನಿರೂಪಿಸಿದರು ಹಾಗೂ ಸಿಬ್ಬಂದಿ ಶಕೀಲಾ ಕೆ ಅವರು ವಂದಿಸಿದರು.