Home » “ಪ್ರಥಮ ಚಿಕಿತ್ಸಾ” ಕಾರ್ಯಗಾರ
 

“ಪ್ರಥಮ ಚಿಕಿತ್ಸಾ” ಕಾರ್ಯಗಾರ

ಕೋಟೇಶ್ವರ ಸರ್ಕಾರಿ ಪದವಿ ಕಾಲೇಜು

by Kundapur Xpress
Spread the love

ಕೋಟೇಶ್ವರ : ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ. ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ, ಹಾಗೂ ಭಾರತೀಯ ರೆಡ್‌ಕ್ರಾಸ್ ಘಟಕ ಕುಂದಾಪುರ ವತಿಯಿಂದ ಪ್ರಥಮ ಚಿಕಿತ್ಸೆ ಕಾರ್ಯಗಾರವನ್ನು ಕಾಲೇಜಿನಲ್ಲಿ ದಿನಾಂಕ: 15.11.2024ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇವರು ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಮಹತ್ವನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಯಕರ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯು ವ್ಯಕ್ತಿಯ ಜೀವವನ್ನು ಉಳಿಸಲು ಹೇಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ. ಸೋನಿ ಡಿಕೋಸ್ಟಾ ಇವರು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಅPಖ ಮಾಡುವ ವಿಧಾನವನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ಹಾಗೂ ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕರಾದ ಚೇತನಾ ಎಂ. ಇವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಾಣಿಜ್ಯಶಾಸ್ತç ಮುಖ್ಯಸ್ಥರಾದ ಡಾ. ಶೇಖರ ಬಿ. ವಂದಿಸಿದರು.

   

Related Articles

error: Content is protected !!