ಕೋಟೇಶ್ವರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನೆಗುಡ್ಡೆ, ಕುಂಭಾಶಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೋಟೇಶ್ವರ ವೃತ್ತಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟವು ಉತ್ಸಾಹಭರಿತವಾಗಿ ನಡೆಯಿತು.
ಪಂದ್ಯಾಟವನ್ನು ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ರಾಜೇಶ್ ಪೈ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಗ್ರೇಡ್–1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಕುಸುಮಾಕರ ಶೆಟ್ಟಿ, ಸಂಘದ ತಾಲೂಕು ಅಧ್ಯಕ್ಷರಾದ ಶ್ರೀ ಉದಯ ಮಡಿವಾಳ ಎಂ., ಶ್ರೀ ಬಾಲಕೃಷ್ಣ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಪ್ರಸನ್ನ ಆಚಾರ್ ಹಾಗೂ ಉದ್ಯಮಿಗಳಾದ ಶ್ರೀ ಸುನಿಲ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಿಆರ್‌ಪಿಗಳಾದ ಶ್ರೀಮತಿ ಶೈಲಾ, ಶ್ರೀ ಪ್ರಕಾಶ್ ಜೋಗಿ ಹಾಗೂ ಶ್ರೀಮತಿ ಸುಚಿತ್ರ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಿ ಪದ್ಮಜಾ ನಿರೂಪಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶರ್ಮಿಳ ಅತಿಥಿಗಳನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮಣಿಯಮ್ಮ ವಂದಿಸಿದರು.
ಪಂದ್ಯಾಟದ ಫಲಿತಾಂಶ
ಬಾಲಕರ ವಿಭಾಗ
ಪ್ರಥಮ: ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ), ಕೋಟೇಶ್ವರ
ದ್ವಿತೀಯ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಡಾಕೆರೆ
ಬಾಲಕಿಯರ ವಿಭಾಗ
ಪ್ರಥಮ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಡಾಕೆರೆ
ದ್ವಿತೀಯ: ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ), ಕೋಟೇಶ್ವರ
ಪಂದ್ಯಾಟದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ಕ್ರೀಡಾ ಮನೋಭಾವ, ಶಿಸ್ತು ಹಾಗೂ ತಂಡದ ಒಗ್ಗಟ್ಟಿನಿಂದ ನಡೆದ ಪಂದ್ಯಾಟವು ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.
ವಿಜೇತ ತಂಡಗಳಿಗೆ ಶುಭಾಶಯಗಳನ್ನು ಸಲ್ಲಿಸಿದ ಗಣ್ಯರು, ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಬೆಳೆಸುವಲ್ಲಿ ಇಂತಹ ವೃತ್ತಮಟ್ಟದ ಪಂದ್ಯಾಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

