194
ಉಡುಪಿ : ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿ.ವಿ.ಯ ಅಂಗ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಅ. 26 ಮತ್ತು 27ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಆವರಣದಲ್ಲಿ ‘ಕೃಷಿ ಮೇಳ-2024’ ಆಯೋಜಿಸಲಾಗಿದೆ ಎಂದು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರದ ಸಹ ನಿರ್ದೇಶಕ ಡಾ| ಧನಂಜಯ ಬಿ.ತಿಳಿಸಿದ್ದಾರೆ
ಕೃಷಿ ಮೇಳವನ್ನು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹಾಗೂ ಕೃಷಿ ಮತ್ತು ಪ್ರದರ್ಶನ ಮಳಿಗೆಗಳನ್ನು ಕೋಟದ ಜನತಾ ಫಿಶ್‌ಮಿಲ್ ಮತ್ತು ಆಯಿಲ್ ಪ್ರೊಡಕ್ಟ್ ವ್ಯವಸ್ಥಾಪಕ ನಿರ್ದೇಶಕ ಆನಂದ ಸಿ. ಕುಂದರ್ ಉದ್ಘಾಟಿಸಲಿದ್ದಾರೆ. ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅ.26 ಮತ್ತು 27ರಂದು ಮಧ್ಯಾಹ್ನ 2.00ರಿಂದ ಕೃಷಿ ಮತ್ತು ತೋಟಗಾರಿಕೆಯ ಕುರಿತು ಗೋಷ್ಠಿಗಳು ನಡೆಯಲಿವೆ. ಕೃಷಿ ಮೇಳದಲ್ಲಿ 20 ಮಳಿಗೆಗಳು ಇರಲಿದ್ದು ಕರಾವಳಿ ಮತ್ತು ಇತರ ಭಾಗದಿಂದ 2ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದರು.

