ಉಡುಪಿ : ಗುರುವಾರ ದೀಪಾವಳಿ ಹಬ್ಬದ ಲಕ್ಷ್ಮೀಪೂಜೆಯಂದು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರು ಕೃಷ್ಣನ ದರ್ಶನ ಪಡೆದು, ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದುಕೊಂಡರು.
ಈ ಸಂದರ್ಭ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯಕುಮಾರ್ಶೆಟ್ಟಿ ಮುಂತಾದವರಿದ್ದರು. ಮಠದ ದಿವಾನರಾದ ನಾಗರಾಜ ಆಚಾರ್ಯ ಸಚಿವೆಯನ್ನು ಬರ ಮಾಡಿಕೊಂಡರು.