239
ಕುಂದಾಪುರ : ಕೆ ಎಸ್ ಆರ್ ಟಿ ಸಿ ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ ಆರಂಭಿಸಿರುವ ಶಕ್ತಿ ಯೋಜನೆಗೆ ಉಡುಪಿಯ ಡಾ. ವಿ ಎಸ್ ಆಚಾರ್ಯ ಬಸ್ ನಿಲ್ದಾಣದಲ್ಲಿಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಾಲನೆ ನೀಡಿದರು ಅವರು ಸರಕಾರಿ ಬಸ್ ನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಉಡುಪಿ ನಗರವನ್ನು ಸುತ್ತಿದರು
ಉಡುಪಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯ ಸರಕಾರವು ಚುನಾವಣಾ ಅವಧಿಯಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದರು
ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ ಅಗಸ್ಟ್ 15 ರಂದು ಚಾಲನೆ ನೀಡಲಾಗುವುದು ಎಂದ ಅವರು ರಾಜ್ಯದ ಬಿಪಿಎಲ್ ಮತ್ತು ಎಪಿಲ್ ನ ಎಲ್ಲಾ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದು ಈ ಕುರಿತ ಅರ್ಜಿ ನಮೂನೆಯನ್ನು ಇನ್ನು ಎರಡು ದಿನದಲ್ಲಿ ಬಿಡುಗಡೆಗೊಳಿಸಲಾಗುವುದು ಆನ್‌ಲೈನ್ ಮೂಲಕ ಅಥವಾ ಸಿಡಿಪಿಓ ಗಳ ಮೂಲಕ ಹಾಗೂ ಅಂಗನವಾಡಿ ಶಿಕ್ಷಕರ ಮೂಲಕ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು

