Home » ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಿಸುವ ಬೆಳ್ಳಿರಥಕ್ಕೆ
 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಿಸುವ ಬೆಳ್ಳಿರಥಕ್ಕೆ

ಶಾಸಕ ಎ. ಕಿರಣ್ ಕೊಡ್ಗಿ ಚಾಲನೆ

by Kundapur Xpress
Spread the love

ಕೋಟೇಶ್ವರ: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯ ವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಿಸುವ ಬೆಳ್ಳಿ ರಥ ಸುಳ್ಯದ ಅಕಾಡೆಮಿಯಲ್ ಎಜುಕೇಶನ್ ಬಿ ತಂಡದ ಅಧ್ಯಕ್ಷ ಡಾ. ಕೆ ವಿ ರೇಣುಕಾ ಪ್ರಸಾದ್ ಅವರು ಮತ್ತು ಅವರ ಮನೆಯವರು ಸಂಕಲ್ಪಿಸಿದಂತೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಸಮರ್ಪಿಸುವ ಬೆಳ್ಳಿ ರಥವು ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ರಥ ಶಿಲ್ಪಿ ಬಿ. ಲಕ್ಷ್ಮೀನಾರಾಯಣ ಆಚಾರ್ಯರು ಮತ್ತು ಕೋಟೇಶ್ವರ ರಥಶಿಲ್ಪಿ ರಾಜಗೋಪಾಲ ಆಚಾರ್ಯರು ನಿರ್ಮಿಸಿದ ಬೆಳ್ಳಿ ರಥ ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನೆರವೇರಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಿಸುವ ಬೆಳ್ಳಿ ರಥದ ಯಾತ್ರೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಚಾಲನೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೋಟೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರಾಗಿಣಿ ದೇವಾಡಿಗ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ,, ಕೋಣಿ ಕೃಷ್ಣ ಕಾರಂತ್,, ರಥಶಿಲ್ಪಿ ಬಿ.ಲಕ್ಷ್ಮೀನಾರಾಯಣ ಆಚಾರ್ಯ,, ರಾಜಗೋಪಾಲ ಆಚಾರ್ಯ ಕೋಟೇಶ್ವರ, ಉದ್ಯಮಿ ಮಾರ್ಕೊಡ್ ಸುಧೀರ್ ಕುಮಾರ್ ಶೆಟ್ಟಿ,, ಜಿ. ಪ್ರಕಾಶ್ ಪೂಜಾರಿ ಬೀಜಾಡಿ ಹಾಗೂ ಕೋಟಿಲಿಂಗೇಶ್ವರ ವ್ಯವಸ್ಥಾಪನ ಸಮಿತಿಯ ಸದಸ್ಯರು, ಕೋಟೇಶ್ವರ ಗ್ರಾಮ ಪಂಚಾಯಿತಿನ ಸದಸ್ಯರು,, ಇನ್ನಿತರ ಪ್ರಮುಖರು, ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು

 

Related Articles

error: Content is protected !!