ಕುಂದಾಪುರ : ಕೇಂದ್ರ ಸರಕಾರ 11 ವರ್ಷ ಆಡಳಿತವನ್ನು ಪೂರ್ಣಗೊಳಿಸಿದ್ದು ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿದ್ದು ಈ ಯೋಜನೆ ಜನರ ಆಶಾಕಿರಣವಾಗಿದ್ದು ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಉದ್ದೇಶ ವಿಕಸಿತ ಭಾರತ ಸಂಕಲ್ಪ ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ತಿಳಿಸಿದರು.
ಕೋಟೇಶ್ವರದ ಶಾರದ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕುಂದಾಪುರ ಮಂಡಲ ವತಿಯಿಂದ ಆಯೋಜಿಸಲಾದ ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಅವರು ಕೇಂದ್ರ ಬಿಜೆಪಿ ಸರ್ಕಾರ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಕೃಷಿ, ಕೈಗಾರಿಕೆ, ಸೇವಾ ವಲಯ, ಆರೋಗ್ಯ, ಶಿಕ್ಷಣ ಅಭಿವೃದ್ಧಿಗೆ ಶ್ರಮಿಸಿದೆ ಎಂದು ನುಡಿದರು
ಕಾರ್ಯಕರ್ತರು ಕೇಂದ್ರ ಸರ್ಕಾರದ 11 ವರ್ಷಗಳ ಸಾಧನೆಯನ್ನು ಮನೆ ಮನೆಗೆ ತಿಳಿಸುವ ಕಾರ್ಯ ಮಾಡಬೇಕು’ಎಂದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದ್ದರು ಕಾರ್ಯಕ್ರಮವನ್ನ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ನಿರ್ವಹಿಸಿ ಸುಧೀರ್ ಕೆ. ಎಸ್ ಸ್ವಾಗತಿಸಿ ವಂದಿಸಿದರು.
ವೇದಿಕೆಯಲ್ಲಿ ಮೋದಿಜಿ ನೇತೃತ್ವದ 11ನೇ ವರ್ಷದ ಸಾಧನೆಯನ್ನು ಮನೆಮನೆಗಳಿಗೆ ತಲುಪಿಸುವ ಕಾರ್ಯಕ್ರಮದ ಕುಂದಾಪುರ ಮಂಡಲದ ಸಂಚಾಲಕರಾದ ಸುನಿಲ್ ಶೆಟ್ಟಿ ಹೇರಿಕುದ್ರು,, ಸಹ ಸಂಚಾಲಕರಾದ ರೂಪಾ ಪೈ ಮತ್ತು ರಾಜೇಶ್, ಹಾಗೂ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮೋದಿ ಸರಕಾರ ಅಧಿಕಾರ ವಹಿಸಿ ಕೊಂಡ ವರ್ಷದಿಂದ ಪ್ರತಿ ವರ್ಷ 1ರೂಪಾಯಿಗೆ ಸಾರ್ವಜನಿಕರಿಗೆ 12 ದಿನ ಸೇವೆ ನೀಡುತ್ತಾ ಬಂದಿರುವ ಸತೀಶ್ ಪ್ರಭು ಅವರನ್ನು ಅಭಿನಂದಿಸಲಾಯಿತು

