ಕುಂದಾಪುರ : ಸೇವೆ ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣದ ಮೋದಿ ಸರ್ಕಾರದ 11ನೇ ವರ್ಷ ಆಚರಣೆಯ ಅಂಗವಾಗಿ ಕುಂದಾಪುರದ ಬಿಜೆಪಿ ಕಾರ್ಯಾಲಯದಲ್ಲಿ ಕುಂದಾಪುರ ಕ್ಷೇತ್ರ ಮಟ್ಟದ ಕಾರ್ಯಗಾರದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭಾಗಿಯಾಗಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಗಾರ ಆರಂಭಕ್ಕೂ ಮುನ್ನ ಗುಜರಾತ್ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರನ್ನುಸ್ಮರಿಸಿ ಒಂದು ನಿಮಿಷಗಳ ಕಾಲ ಮೌನ ಆಚರಣೆ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಅಧ್ಯಕ್ಷರಾದ *ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದರು.
ಮೋದಿಜಿ ನೇತೃತ್ವದ 11ನೇ ವರ್ಷದ ಸರಕಾದ ಸಾಧನೆಯನ್ನು ಮನೆ ಮನೆಗಳಿಗೆ ತಲುಪಿಸುವ ಕಾರ್ಯಕ್ರಮದ ಸಂಚಾಲಕರಾದ *ಸಂಧ್ಯಾ ರಮೇಶ್* ಅವರು ಮಾತನಾಡಿ ಕಾರ್ಯಕ್ರಮದ ಸಮಗ್ರ ಮಾಹಿತಿ ನೀಡಿದರು
ವೇದಿಕೆಯಲ್ಲಿ 11ನೇ ವರ್ಷದ ಸಾಧನೆಯನ್ನು ಮನೆಮನೆಗಳಿಗೆ ತಲುಪಿಸುವ ಕಾರ್ಯಕ್ರಮದ ಕುಂದಾಪುರ ಮಂಡಲದ ಸಂಚಾಲಕರಾದ ಸುನಿಲ್ ಶೆಟ್ಟಿ ಹೇರಿಕುದ್ರು,, ರಾಜೇಶ್, ಹಾಗೂ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಇದ್ದರು.

