Home » ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆ : ಪೂರ್ವಭಾವಿ ಸಭೆ
 

ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆ : ಪೂರ್ವಭಾವಿ ಸಭೆ

by Kundapur Xpress
Spread the love

ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಕಾರ್ಯಾಲಯದಲ್ಲಿ ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆಯ ವಿರುದ್ಧ ಧರಣಿಯ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು ಜುಲೈ 28’ರಂದು ಜಿಲ್ಲಾ ಮಟ್ಟದ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಯಲ್ಲಿದ್ದು. ಜಿಲ್ಲೆಯಲ್ಲಿ ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ಮಾಡುವ ಮೂಲಕ ನಿದ್ದೆಯ ಮಂಪರಿನಲ್ಲಿರುವ ಕಾಂಗ್ರೆಸ್ ಸರಕಾರದ ಕಣ್ಣು ತೆರೆಸುವ ಕೆಲಸ ಆಗಬೇಕಾಗಿದೆ

ನಮುನೆ 9/11 ಇದರ ಅಧಿಕಾರ ಈ ಹಿಂದೆ ಇದ್ದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ನೀಡುವ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಪಕ್ಷದ ಎಲ್ಲ ಪದಾಧಿಕಾರಿಗಳು ಅಣಿಯಾಗಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದ್ದರು ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಅವರು  ಸಲಹೆ ಸೂಚನೆ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಇದರ ಏಕ ವಿನ್ಯಾಸ ನಕ್ಷೆಯ ಸಮಸ್ತ ನಾಗರಿಕರು ಕೂಡ ಭಾಗವಹಿಸಿ ಪ್ರತಿಭಟನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು

 

Related Articles

error: Content is protected !!