ಕುಂದಾಪುರ : ಕುಂದಾಪುರ ಶಾಸಕರ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ (IRB) ಅಧಿಕಾರಿಗಳೊಂದಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಸಾರ್ವಜನಿಕರ ಮನವಿಯಂತೆ ಅವೈಜ್ಞಾನಿಕವಾದ ಹೆದ್ದಾರಿ ಕಾಮಗಾರಿಯಿಂದಾಗಿ ಮಳೆ ನೀರು ಸೂಕ್ತ ರೀತಿಯಲ್ಲಿ ಚರಂಡಿಗೆ ಹರಿದು ಹೋಗದೆ ರಸ್ತೆಯಲ್ಲಿಯೆ ಹರಿಯುತ್ತಿದೆ ಇದರ ಪರಿಣಾಮ ಡಾಮರು ಸವೆತೆದಿಂದಾಗಿ ಹೊಂಡಗಳು ನಿರ್ಮಾಣವಾಗುತ್ತಿದ್ದು. ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಗುಂಡಿಗಳನ್ನು ಮುಚ್ಚುವ ಜತೆಗೆ ಸಾರ್ವಜನಿಕರ ಮನವಿಯಂತೆ ಅಗತ್ಯ ಸ್ಥಳಗಳಲ್ಲಿ ಸೂಚನಾ ಫಲಕ, ಚರಂಡಿಗಳ ಬಗ್ಗೆ ಹಾಗೂ ಸಮರ್ಪಕ ಬೀದಿ ದೀಪಗಳ ಅಳವಡಿಕೆ ಹಾಗೂ ಸರ್ವೀಸ್ ರಸ್ತೆ ನಿರ್ಮಿಸುವ ಕುರಿತು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ IRB ಹಾಗೂ ಕುಂದಾಪುರ ಪುರಸಭೆ ಮುಖ್ಯಾಧಿಕಾರಿಯವರಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಂಘಟನೆ ಹಾಗೂ ಪಕ್ಷದ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.