ಕುಂದಾಪುರ : ಭಾಷೆಗಿಂತ ಬದುಕು ದೊಡ್ಡದು, ಆದರೆ ಭಾಷೆ ಬದುಕಾಗಬೇಕು ಮತ್ತು ನಮಗೆ ಆ ಭಾಷೆಯೇ ಕನ್ನಡವಾಗಬೇಕು ಎಂದು ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ಕೆ. ಹೇಳಿದರು. ಅವರು ಇಲ್ಲಿನ ಗಾಂಧಿ ಮೈದಾನದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಆಚರಣೆಯಂಗವಾಗಿ ಧ್ವಜಾರೋಹಣ ಮಾಡಿ ಸಂದೇಶ ನೀಡಿದರು
ಶಾಸಕ ಕಿರಣ್ ಕುಮಾರ್ ಕೊಡ್ಡಿ, ಕುಂದಾಪುರ ಪೊಲೀಸ್.. ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು., ತಹಸೀಲ್ದಾರ್ ಮಲ್ಲಿಕಾರ್ಜುನ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್, ತಾಲೂಕು ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಕುಸುಮಾಕರ ಶೆಟ್ಟಿ, ಉಪ ತಹಸೀಲ್ದಾರ್ ವಿನಯ್, ಪುರಸಭೆ ಉಪಾಧ್ಯಕ್ಷೆ ವನಿತಾ ಬಿಲ್ಲವ, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರಮೇಶ್ ಕುಲಾಲ್, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ರಾಮಚಂದ್ರ ಮಯ್ಯ ಉಪಸ್ಥಿತರಿದ್ದರು.
ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಪೊಲೀಸ್ ತಂಡದಿಂದ ಕವಾಯತು ನಡೆಯಿತು. ಸಂಚಾರಿ ಠಾಣೆ ಎಸ್ ಐ ಪ್ರಸಾದ್ ಕೆ ಪಥ ಸಂಚಲನದ ನೇತೃತ್ವ ವಹಿಸಿದ್ದರು.