ಕೋಟ : ಧನುರ್ಮಾಸದ ಪ್ರಯುಕ್ತ ಮಹಿಳಾ ವೇದಿಕೆ ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆ ಇವರಿಂದ ಶ್ರೀ ಗುರು ನರಸಿಂಹ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಸಾಂಸ್ಕೃತಿಕ ಸಂಜೆ ಎನ್ನುವ ವೈಶಿಷ್ಟ್ಯಪೂರ್ಣ ಮತ್ತು ವೈವಿಧ್ಯಮಯ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು.
ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕöÈತ ಕೆ. ತಾರನಾಥ ಹೊಳ್ಳ ಮತ್ತು ರಾಜ್ಯ ಜಾನಪದ ಪ್ರಪಂಚ ಪುರಸ್ಕೃತ ಶ್ರೀಮತಿ ಜಾಹ್ನವಿ ಹೇರ್ಳೆ ಇವರುಗಳನ್ನು ಅಭಿನಂದಿಸಲಾಯಿತು.
ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ. ಎಸ್. ಕಾರಂತ , ಕೂಟ ಮಹಾ ಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುರೇಶ್ ತುಂಗ, ಸಾಲಿಗ್ರಾಮ ಅಂಗ ಸಂಸ್ಥೆಯ ಅಧ್ಯಕ್ಷ ಪಿ. ಸಿ. ಹೊಳ್ಳ ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಹಿಳಾ ವೇದಿಕೆ ಅಧ್ಯಕ್ಷೆ ಯಶೋದ. ಸಿ. ಹೊಳ್ಳ ಸ್ವಾಗತಿಸಿ,ಪರಿಚಯಿಸಿದರು.ಸುಜಾತ ಬಾಯಿರಿ ಅಭಿನಂದನಾ ಪತ್ರಗಳನ್ನು ವಾಚಿಸಿದರು. ಕೋಶಾಧಿಕಾರಿ ಪೂರ್ಣಿಮಾ ಅಧಿಕಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಲತಾ ಹೊಳ್ಳ, ಉಪಾಧ್ಯಕ್ಷೆ ವಿಜಯಲಕ್ಷ್ಮೀತುಂಗ ಸಹಕರಿಸಿದರು.