211
ಉಡುಪಿ ಕುತ್ಯಾರು ಗ್ರಾಮ ಪಂಚಾಯತ್ ಬಳಿ ಹಮ್ಮಿಕೊಳ್ಳಲಾದ “ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ” ಇದರ ನೋಂದಣಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಶಾಸಕರು ಮಾತನಾಡಿ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಒಂದು. ಈ ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಕೂಡ ಯಾವುದೇ ಹಂಗಿಲ್ಲದೆ ಬದುಕಬೇಕು ದುಡಿಯುವ ಕೈಗಳಿಗೆ ಒಂದಷ್ಟು ಕೆಲಸ ನೀಡಬೇಕು ಎಂಬ ಯೋಚನೆ ಇಟ್ಟುಕೊಂಡು ಜಾರಿಗೆ ತಂದಿರುವ ಯೋಜನೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಎಂದು ಹೇಳಿದ ಅವರು ಅರ್ಹರು ಇದರ ಸದುಪಯೋಗ ಪಡೆಯುವಂತಾಗಲಿ ಎಂದರು.
ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಉಪಾಧ್ಯಕ್ಷರಾದ ಭಾರತಿ ರಾಘವೇಂದ್ರ ಹಾಗೂ ಕುತ್ಯಾರು ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.

