ಉಡುಪಿ : ಉಡುಪಿಯ ನೇಜಾರಿನಲ್ಲಿ ನಡೆದ ಭೀಕರ ಕೊಲೆ ಪ್ರಕರಣದ ಮನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು ಹಸೀನಾ ಅವರ ಪತಿ ನೂರ್ ಮಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಸಚಿವರು ಅವರಿಗೆ ಸಾಂತ್ವನ ಹೇಳಿದರು
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಇದಾಗಿದ್ದು ಆರೋಪಿ ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಷವಾಗಿ ಹತ್ಯೆಗೈದು ಕಾಕ್ಷಸಿ ಕೃತ್ಯ ಎಸಗಿದ್ದಾನೆ ಇಂದು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ ಆರೋಪಿಯನ್ನು ಶೀಘ್ರವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ ನೊಂದ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನಿಸುತ್ತೇನೆ ಎಂದರು
ಈ ವೇಳೆ ಸಚಿವರೊಂದಿಗೆ ಮಾಜಿ ಶಾಸಕ ಗೋಪಾಲ್ ಪೂಜಾರಿ ಉಡುಪಿಯ ಕಾಂಗ್ರೆಸ್ ನಾಯಕರಾದ ಪ್ರಸಾದ್ ರಾಜ್ ಕಾಂಚನ್ ಕುಂದಾಪುರದ ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಪ್ರಖ್ಯಾತ್ ಶೆಟ್ಟಿ ಎಂ ಎ ಗಪೂರ್ ಸರಳ ಕಾಂಚನ್ ಡಾ.ಸುನಿತಾ ಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಜಿಲ್ಲಾ ಪಂಚಾಯಿತ ಸಿ ಇ ಓ ಪ್ರಸನ್ನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಂದಾಪುರದ ಉಪ ವಿಭಾಗಾಧಿಕಾರಿ ಉಪಸ್ಥಿತರಿದ್ದರು

