ಬೈಂದೂರು : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ,ಬೈಂದೂರು ಶಾಸಕರಾಗಿ ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿರುವ ಜೊತೆಗೆ ವಿವಿಧ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಸಂಘ-ಸಂಸ್ಥೆಗಳ ಸಹಿತ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ,ರಾಮಕ್ಷತ್ರಿಯ ಸಂಘದ ರಾಷ್ಟ್ರೀಯ ಅಧ್ಯಕ್ಷರಾಗಿ ಗಣನೀಯ ಸೇವೆ ಸಲ್ಲಿಸಿರುವ ಲಕ್ಷ್ಮೀನಾರಾಯಣ ಬೈಂದೂರು ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ,ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ದೆ,ತಿಂಗಳೆ ವಿಕ್ರಮಾರ್ಜುನ ಹೆಗ್ದೆ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರುಗಳಾದ ವಿ.ಸುನೀಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ! ಧನಂಜಯ ಸರ್ಜಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.