40
ಕುಂದಾಪುರ: ಲ. ಮೊಹಮ್ಮದ್ ಅಶ್ರಫ್ ಅವರು 2026–27ನೇ ಸಾಲಿನ ಅವಧಿಗೆ ಲಯನ್ಸ್ ಜಿಲ್ಲೆ 317ಸಿ ವ್ಯಾಪ್ತಿಯ ಪ್ರಾಂತ್ಯ–1ರ ವಲಯ–2ರ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಇವರು ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್‌ನಲ್ಲಿ ಅಧ್ಯಕ್ಷ ಹಾಗೂ ಖಜಾಂಚಿ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಕಳೆದ ನಾಲ್ಕು ವರ್ಷಗಳಿಂದ ಲಯನ್ಸ್ ಜಿಲ್ಲಾ ಸಂಪುಟ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಲಯನ್ಸ್ ಚಳವಳಿಯಲ್ಲಿ ಅವರ ಸಕ್ರಿಯ ಸೇವೆ, ನಾಯಕತ್ವ ಹಾಗೂ ಸಂಘಟನಾ ಕೌಶಲ್ಯವನ್ನು ಪರಿಗಣಿಸಿ ಈ ಜವಾಬ್ದಾರಿಯುತ ಹುದ್ದೆಗೆ ಅವರನ್ನು ಆಯ್ಕೆ ಮಾಡಲಾಗಿದೆ.

