Home » ಶಿಕ್ಷಣದೊಂದಿಗೆ ದೇಶಭಕ್ತಿ ಬೆಳೆಸಿಕೊಳ್ಳಿ
 

ಶಿಕ್ಷಣದೊಂದಿಗೆ ದೇಶಭಕ್ತಿ ಬೆಳೆಸಿಕೊಳ್ಳಿ

ಎರ್‌ ಮಾರ್ಶಲ್ ರಮೇಶ್‌ ಕಾರ್ಣಿಕ್‌

by Kundapur Xpress
Spread the love

ಕುಂದಾಪುರ : ನಮ್ಮ ದೇಶದ ಮೇಲೆ ಅನೇಕ ಆಕ್ರಮಣಗಳಾಗಿದ್ದು ಹಲವು ಹೋರಾಟ ತ್ಯಾಗ ಬಲಿದಾನಗಳ ಮೂಲಕ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾಪುರುಷರ ಆದರ್ಶವನ್ನು ಮೈಗೂಡಿಸಿಕೊಂಡು ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕೆಂದು ಎರ್‌ ಮಾರ್ಶಲ್ ರಮೇಶ್‌ ಕಾರ್ಣಿಕ್‌ ವಿದ್ಯಾರ್ಥಿಗಳಿಗೆ ಕರೆ ನೀಡಿದರು

ಅವರು ಯಡಾಡಿ-ಮತ್ಯಾಡಿಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ವಿದ್ಯಾರಣ್ಯ (ಲಿಟ್ಸ್ ಸ್ಟಾರ್) ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು

ಸಮಾರಂಭದಲ್ಲಿ ಸುಜ್ಞಾನ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಾಜಾಂಚಿ ಭರತ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್ ಕೆ., ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ವತಿಯಿಂದ ಏರ್ ಮಾರ್ಷಲ್ ರಮೇಶ್ ಕಾರ್ಣಿಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊನೆಯಲ್ಲಿ ರವೀಂದ್ರ ಪ್ರಭು ಬಳಗದವರಿಂದ ದೇಶಭಕ್ತಿ ಗೀತೆಗಳ ರಸಮಂಜರಿ ಕಾರ್ಯಕ್ರಮ ಜರುಗಿತು

   

Related Articles

error: Content is protected !!