ಮಹಾರಾಷ್ಟ್ರ : ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ ಅವರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಢ್ನವೀಸ್ ಉಪಸ್ಥಿತರಿದ್ದರು
ಈ ಅಟಲ್ ಸೇತು ಹೆಸರಿನ ಸೇತುವೆಯು ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಒಟ್ಟು 22.00 ಕಿಲೋಮೀಟರ್ ಉದ್ದವನ್ನು ಹೊಂದಿದ್ದು ಇದು ಭಾರತದ ಅತೀ ಉದ್ದದ ಸೇತುವೇ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು ಜಗತ್ತಿನ 12ನೇ ಅತೀ ಉದ್ದದ ಸೇತುವೆ ಆಗಿದೆ ಈ ಸೇತುವೆಗೆ ʼಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುʼ ಎಂದು ನಾಮಕರಣ ಮಾಡಲಾಗಿದೆ ಇದಕ್ಕೆ ತಗುಲಿದ ಒಟ್ಟು ವೆಚ್ಚ 17,840 ಕೋಟಿ ರೂಪಾಯಿ ಆಗಿದೆ 2016 ರಲ್ಲಿ ಮಾನ್ಯ ನರೇಂದ್ರ ಮೋದಿಯವರೇ ಈ ಸೇತುವೆಯ ಶಂಕುಸ್ಥಾಪನೆ ನೆರವೇರಿಸಿದ್ದರು
ಇದೇ ಸಂದರ್ಭದಲ್ಲಿ ಮೋದಿಯವರಿಗೆ ಪೇಟ ತೊಡಿಸಿ ರಾಮ ಮಂದಿರದ ಪ್ರತಿಕೃತಿಯ ಸ್ಮರಣಿಕೆಯನ್ನು ನೀಡಲಾಯಿತು