Home » ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ : ಬಿಜ್‌ – ಕ್ವಿಜ್
 

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ : ಬಿಜ್‌ – ಕ್ವಿಜ್

by Kundapur Xpress
Spread the love

ಮೂಡ್ಲಕಟ್ಟೆ  : ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ  ವಿವಿಧ ಡಿಗ್ರಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಜ್-ಕ್ವಿಜ್ ಅಂತಿಮ ಸುತ್ತಿನ ಸ್ಪರ್ಧೆಯನ್ನು ನಡೆಸಲಾಯಿತು. ಸಮಾರೋಪ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ ಐ ಟಿ ಕೆ ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿ ಸೋಜರವರು ವಹಿಸಿದ್ದರು. ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅವರು ಅಭಿನಂದಿಸಿದರು. ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವೀತಿಯ ಬಹುಮಾನ ಗಳಿಸಿದರು ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾರವರು ತಮ್ಮ ಪ್ರಸ್ತಾವಿಕ ಭಾಷಣದಲ್ಲಿ ಸ್ಪರ್ಧೆಯ ವಿವಿಧ ಹಂತಗಳನ್ನು ವಿವರಿಸಿದರಲ್ಲದೆ ಆಡಳಿತ ಮಂಡಳಿಯ ಪ್ರೋತ್ಸಾಹವನ್ನು ನೆನಪಿಸಿ ಕೊಂಡರು. ಈ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಂ ಬಿ ಎ ವಿಭಾಗದ
ಅಸಿಸ್ಟೆಂಟ್ ಪ್ರೊಫೆಸರ್ ನೀಲ್ ಕ್ವಿಜ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದರು. ಎಂ.ಬಿ.ಎ ವಿದ್ಯಾರ್ಥಿಗಳಾದ ಕು. ಸಹರಾ ನಿರೂಪಿಸಿ ಕು. ಶಾಂಭವಿ ವಂದಿಸಿದರು.

 

Related Articles

error: Content is protected !!