Home » ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಎಂ.ಬಿ.ಎ ವಿಭಾಗ : ಅಂತರಾಷ್ಟ್ರೀಯ ಯೋಗ ದಿನಾಚರಣೆ
 

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಎಂ.ಬಿ.ಎ ವಿಭಾಗ : ಅಂತರಾಷ್ಟ್ರೀಯ ಯೋಗ ದಿನಾಚರಣೆ

by Kundapur Xpress
Spread the love

ಮೂಡ್ಲಕಟ್ಟೆ : ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಎಸ್ ಬಿಜೂರು ಇವರು ಉಪಸ್ಥಿತರಿದ್ದು ಯೋಗದಿಂದಾಗುವ ಉಪಯೋಗಗಳ ಬಗ್ಗೆ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ತಿಳಿಸಿದರು. ಯೋಗವು ಮನುಷ್ಯನ ಆಂತರಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಾಯ ಮಾಡುತ್ತದೆಂದು ತಿಳಿಸಿದರು. ಯೋಗದ ಪ್ರಾಮುಖ್ಯತೆ ಮತ್ತು ಯೋಗಾಸನ ಮಾಡಬೇಕಾದರೆ ಪಾಲಿಸಬೇಕಾದ ಕ್ರಮಗಳ ಬಗ್ಗೆ ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಕೆಲವೊಂದು ಯೋಗಾಭ್ಯಾಸವನ್ನು ಮಾಡಿಸಿದರು.

ಈ ಕಾರ್ಯಕ್ರಮದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಮತ್ತು ಇತರ ಉಪನ್ಯಾಸಕರು ಉಪಸ್ಥಿತರಿದ್ದು ಎಂ.ಬಿ.ಎ ವಿಭಾಗದ ವಿದ್ಯಾರ್ಥಿನಿ ಕುಮಾರಿ ಸಿಂಚನ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

 

Related Articles

error: Content is protected !!