ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 29 ಕುಟುಂಬಗಳಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ದಿನಾಂಕ 28-03-2023 ರಂದು ಬ್ರಹ್ಮಾವರ ತಾಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ವಿತರಿಸಿದರು
ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕಿನಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರು ಈ ಕುಟುಂಬಗಳಿಗೆ ಡೀಮ್ಡ್ ಫಾರೆಸ್ಟ್ ಹಾಗೂ ಗೋಮಾಳದ ಸಮಸ್ಯೆಯಿಂದಾಗಿ ಹಕ್ಕುಪತ್ರ ನೀಡಲು ಸಮಸ್ಯೆ ಉಂಟಾಗಿರುತ್ತದೆ. ವಿಶೇಷ ಪ್ರಕರಣಗಳ ಅಡಿ ಗೋಮಾಳ ಹಾಗೂ ಡೀಮ್ಡ್ ವಿರಹಿತಗೊಳಿಸಿ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು