ಖೇಲೊ ಇಂಡಿಯಾ ಯೋಜನೆಯಡಿ ಶಿವಮೊಗ್ಗಕ್ಕೆ ಮಂಜೂರಾಗಿರುವ ವಿಶೇಷ ಕ್ರೀಡಾ ತರಬೇತಿ ಕೇಂದ್ರವು ನಗರದ ವಾಜಪೇಯಿ ಬಡಾವಣೆಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಇಂದು ಅಭಿವೃದ್ಧಿ ಸ್ಥಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಸಾಗರ ರಸ್ತೆಯಲ್ಲಿರುವ ವಾಜಪೇಯಿ ಬಡಾವಣೆಯಲ್ಲಿನ ಶಿವಮೊಗ್ಗ ಮತ್ತು ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಹಾನಗರ ಪಾಲಿಕೆಗೆ ಆಟದ ಮೈದಾನ ಅಭಿವೃದ್ಧಿಗೆ ಹಸ್ತಾಂತರಗೊಂಡಿರುವ 135 ಎಕರೆ ಜಾಗದಲ್ಲಿ ನಿರ್ಮಿಸಲು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಯಿತು. ಅದರಂತೆ, ಸ್ಕಾರ್ಟ್ ಸಿಟಿ ಲಿ. ಶಿವಮೊಗ್ಗ ಇವರ ವತಿಯಿಂದ ಅಂದಾಜು 4.5 ಕೋಟಿ ವೆಚ್ಚದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಟರ್ಫ್ ಅಂಕಣವನ್ನು ಈಗಾಗಲೇ ನಿರ್ಮಾಣ ಮಾಡಲಾಗಿದ್ದು, ಅಂತಿಮ ಹಂತದ ಕಾಮಗಾರಿ ಬಾಕಿ ಉಳಿದಿರುತ್ತದೆ. ಖೇಲೊ ಇಂಡಿಯಾ ಯೋಜನೆಯಡಿ ವಿವಿಧೋದ್ದೇಶ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲು 11.83 ಕೋಟಿ ಅನುದಾನ ಮಂಜೂರಾಗಿರುತ್ತದೆ.
ಈ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಲಿ, ಶಿವಮೊಗ್ಗದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ – ಸಹಾಯಕ ನಿರ್ದೇಶಕರಾದ ಶ್ರೀ.ಎಂ.ಟಿ.ಮಂಜುನಾಥ ಸ್ವಾಮಿ, ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿ. ಮತ್ತು ಸೂಡಾದ ಇಂಜಿನಿಯರ್ ಮತ್ತು ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ :-ಈಶ್ವರ್ ಸಿ ನಾವುಂದ