194
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆ ಪ್ರಯುಕ್ತ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಉಡುಪಿಯ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ದಿನಾಂಕ 12-04-2024 ರಂದು ಮಣಿಪಾಲದ ಮಾಹೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಬಿಜೆಪಿ ಉಡುಪಿ ನಗರಾಧ್ಯಕ್ಷರಾದ ದಿನೇಶ್ ಅಮಿನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಮಹೇಶ್ ಠಾಕೂರ್, ಕಿರಣ್ ಕುಮಾರ್, ನಗರ ಸಭಾ ಸದಸ್ಯರಾದ ಕಲ್ಪನಾ ಸುಧಾಮ, ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷರಾದ ವೀಣಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

