ಕುಂದಾಪುರ : ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಕರಾವಳಿ ಭಾಗದ ಬಹಳ ಪ್ರಸಿದ್ಧವಾದ ಕಾರಣಿಕ ಕ್ಷೇತ್ರ ಕುಂಭಾಶಿ ಸೂರ್ಯನಾರಾಯಣ ದೇಗುಲ ಹಾಗೂ ಸುತ್ತಮುತ್ತಲು ಸ್ವಚ್ಛತಾ ಕಾರ್ಯಕ್ರಮಗಳ ಮೂಲಕ ದೇಶದ ಪ್ರಧಾನಮಂತ್ರಿಯವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ ಸುಧೀರ್.ಕೆ. ಎಸ್. ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸೌರಭಿ ಪೈ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಶ್ವೇತಾ ಶ್ರೀನಿಧಿ ಉಪಾಧ್ಯಾಯ,, ವಿದ್ಯಾ ಸಾಲಿಯನ್, ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ್ ಕಾಮತ್ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಸುಕನ್ಯಾ ಶೆಟ್ಟಿ , ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಪಕ್ಷದ ಪ್ರಮುಖರು, ಮೋದಿಜಿ ಅವರ ಅಭಿಮಾನಿಗಳು ಕಾರ್ಯಕರ್ತರು ಈ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

