ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಾಪು ತಾಲೂಕು ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಇದರ ಸಹಯೋಗದೊಂದಿಗೆ ಪರಮಪೂಜ್ಯ ಪದ್ಮ ವಿಭೂಷಣ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ದಿನಾಂಕ 19-01-2025 ರಂದು ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಿಲಾದ “ತಾಲೂಕು ಮಟ್ಟದ ಮಹಿಳಾ ಸಮಾವೇಶ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ”ವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.