50
ಕಾಪು : ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ “ಮನ್ ಕೀ ಬಾತ್” ಕಾರ್ಯಕ್ರಮವನ್ನು ಹಿರಿಯಡಕ 8ನೇ ವಾರ್ಡಿನ ಅಧ್ಯಕ್ಷರ ಮನೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ವಾರ್ಡ್ ಅಧ್ಯಕ್ಷರಾದ ಉಮೇಶ್, ಉದಯ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

