242
ಮಂಗಳೂರು : ಗಣೇಶೋತ್ಸವ, ಜನ್ಮಾಷ್ಟಮಿ ಮೊದಲಾದ ಉತ್ಸವಗಳನ್ನು ರಾತ್ರಿ 10.30ರೊಳಗೆ ಮುಗಿಸಬೇಕು. ಆ ಬಳಿಕ ಯಾವುದೇ ಆಚರಣೆಗೆ ಅವಕಾಶವಿಲ್ಲ. ಅಲ್ಲದೇ ಡಿಜೆ ಬಳಕೆಗೂ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಭಾನುವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಹವಾಲು ಆಲಿಕೆ ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪುನರುಚ್ಚರಿಸಿದ್ದಾರೆ.
ಅಲ್ಲದೇ ಈ ಆದೇಶ ಉಲ್ಲಂಘನೆ ಕಂಡುಬಂದರೆ ಸಾರ್ವಜನಿಕರು ಪೊಲೀಸ್ ಕಂಟ್ರೋಲ್ ರೂಂ ಅಥವಾ 112ಗೆ ಮಾಹಿತಿ ನೀಡಬಹುದು. ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

