ಮಂಗಳೂರು: ಶಾಂತಿ ಸಭೆ
ಮಂಗಳೂರು :ಮಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್, ದ.ಕ.ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಮುಂಬರುವ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಆಯೋಜಿಸಲಾಗಿತು. ಈ ಸಭೆಯಲ್ಲಿ ದ.ಕ.ಜಿಲ್ಲೆ ಮತು ಮಂಗಳೂರು ನಗರದ ವಿವಿಧ ಭಾಗಗಳಿಂದ ಎಲ್ಲಾ ಧರ್ಮದ ಹಲವಾರು ಮುಖಂಡರು ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಿರುತ್ತಾರೆ ಹಾಗೂ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಬಗ್ಗೆ ಭರವಸೆಯನ್ನು ವ್ಯಕ್ತಪಡಿಸಿರುತ್ತಾರೆ. ಇದಲ್ಲದೆ ಸಂಚಾರ ಸುವ್ಯವಸ್ಥೆ ಮಾದಕ ವಸ್ತುಗಳ ನಿಯಂತ್ರಣದ ಬಗ್ಗೆ ಕೂಡ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುತ್ತಾರೆ. ಪೊಲೀಸ್ ಇಲಾಖೆಗೆ ಸಾರ್ವಜನಿಕರಿಂದ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಸಭೆಯಲ್ಲಿ ಹಾಜರಿದ್ದ ಮುಖಂಡರು ಭರವಸೆಯನ್ನು ವ್ಯಕ್ತಪಡಿಸಿರುತ್ತಾರೆ. ಈ ಸಭೆಯಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್ ಜೈನ್ ಐ.ಪಿ.ಎಸ್, ದ.ಕ.ಜಿಲ್ಲಾಧಿಕಾರಿಗಳಾದ ಶ್ರೀ ಮುಳೈ ಮುಗಿಲನ್ ಐ.ಎ.ಎಸ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ರಿಷ್ಯಂತ್ ಐ.ಪಿ.ಎಸ್, ಶ್ರೀ ಅಂಶು ಕುಮಾರ್ ಐ.ಪಿ.ಎಸ್ ಡಿ.ಸಿ.ಪಿ(ಕಾ&ಸು), ಬಿ.ಪಿ ದಿನೇಶ್ ಕುಮಾರ್ ಡಿ.ಸಿ.ಪಿ(ಅ&ಸಂ) ಮಂಗಳೂರು ನಗರ ಮತ್ತು ದ.ಕ.ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು