332
ಬೈಂದೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ವಾರ್ಷಿಕ ಮಹಾಸಭೆಯಲ್ಲಿ ನಾವುಂದ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಅತ್ಯುತ್ತಮ ಕಾರ್ಯ ವೈಖರಿ ಮತ್ತು ಸಂಘದ ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ, ಜಿಲ್ಲಾಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಅವರು ನಾವುಂದ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್ ರಾಜು ಪೂಜಾರಿ ಮತ್ತು ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಸುರೇಶ್ ಅಳ್ವೆಗದ್ದೆ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಿದರು ಈ ಸಂದರ್ಭದಲ್ಲಿ ಸಂಘದ ನಿರ್ಧೇಶಕರಾದ ವಿನಾಯಕ ರಾವ್ ಉಪಸ್ಥಿತರಿದ್ದರು

