ಕುಂದಾಪುರ : ಮರವಂತೆ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿಯದಂತೆ ಸೂಚನಾ ಫಲಕವನ್ನು ಗಂಗೊಳ್ಳಿ ಪೊಲೀಸರು ಅಳವಡಿಸಿದ್ದಾರೆ ಕಳೆದ ನಾಲೈದು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಉಡುಪಿ ಜಿಲ್ಲಾ ಆಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಾರ್ವಜನಿಕರ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಎಲ್ಲೋ ಅಲರ್ಟ್ ಘೋಷಿಸಿದೆ.
ಅದರಂತೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣವಾದ ತ್ರಾಸಿ, ಮರವಂತೆ ಬೀಚ್‌ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಗಂಗೊಳ್ಳಿ ಪೊಲೀಸರು ಪೋಸ್ಟಲ್ ಗಾರ್ಡ್ ಕೆಂಪು ಪಟ್ಟಿ ಹಾಗೂ ಸೂಚನಾ ಫಲಕ ಅಳವಡಿಸಿ ಜಾಗೃತಿ ಮೂಡಿಸಿದ್ದಾರೆ ಕಳೆದ ವರ್ಷ ಮರವಂತೆ ಬೀಚಿನ ಬಂಡೆ ಮೇಲೆ ನಿಂತ ವ್ಯಕ್ತಿಯು ಸಮುದ್ರದ ಅಬ್ಬರದ ಅಲೆಗೆ ಕೊಚ್ಚಿ ಹೋದ ಘಟನೆ ನಡೆದಿದೆ