ಭಟ್ಕಳ : ತಾಲೂಕಿನ ಬೇಂಗ್ರೆಯ ಗಾಲ್ಫ್ ಮೈದಾನದಲ್ಲಿ ನವೆಂಬರ್ 21 ರಿಂದ 23ರ ವರೆಗೆ ಗೆ ವಿಶ್ವ ಮೀನುಗಾರಿಕೆ ದಿನಾಚರಣೆ ಮತ್ತು ರಾಜ್ಯಮಟ್ಟದ ಮತ್ಸ್ಯ ಮೇಳ -2024 ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು
ಮಂಗಳವಾರ ಮಧ್ಯಾಹ್ನ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಹಲವು ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಮೀನುಗಾರಿಕೆ, ಮೀನುಗಾರಿಕೆಯ ಕುರಿತು ಅರಿವು ಮೂಡಿಸುವುದರೊಂದಿಗೆ, ಮನೆಯಲ್ಲಿ ಮೀನು ಸಾಕಾಣಿಕೆ ಮಾಡುವವರಿಗೆ, ಮೀನು ಕೃಷಿಯ ಕುರಿತು ಆಸಕ್ತಿ ಇರುವವರಿಗೆ ಕೂಡಾ ಅನುಕೂಲ ಆಗಲಿದೆ ಎಂದರು