Home » ಮಟ್ಟು ಬೀಚ್ ಬಳಿ ಕಡಲ್ಕೊರೆತ
 

ಮಟ್ಟು ಬೀಚ್ ಬಳಿ ಕಡಲ್ಕೊರೆತ

ಶಾಸಕ ಗುರ್ಮೆ ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

by Kundapur Xpress
Spread the love

ಉಡುಪಿ: ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಬೀಚ್ ಬಳಿ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಹಾಗೂ ಚಂಡಮಾರುತ ಪರಿಣಾಮವಾಗಿ ಕಡಲ್ಕೊರೆತ ಉಂಟಾಗುತ್ತಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಕರೆ ಮಾಡಿ ತುರ್ತು ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು ಹಾಗೂ ಶಾಶ್ವತ ಪರಿಹಾರಕ್ಕೆ ಸಚಿವರ ಬಳಿ ಚರ್ಚಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕೋಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್, ಕೋಟೆ ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ್ ಕೋಟ್ಯಾನ್, ನಾಗರಾಜ್ ಮೆಂಡನ್, ಶಕ್ತಿ ಕೇಂದ್ರದ ಹರ್ಷಿತ್ ಹಾಗೂ ಗಣೇಶ್ ಮಟ್ಟು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 

Related Articles

error: Content is protected !!