ನಾಡಿನ ಸಮಗ್ರ ಅಭಿವೃದ್ಧಿಯೇ ಮೂಲಮಂತ್ರ
ಮಂಗಳೂರು: ಬಿಜೆಪಿಯ ಡಬಲ್ ಎಂಜಿನ್ ಸರಕಾರಕ್ಕೆ ನಾಡಿನ ಸಮಗ್ರ ಅಭಿವೃದ್ಧಿಯೇ ಮೂಲಮಂತ್ರವಾಗಿದ್ದರೆ, ಟ್ರಬಲ್ ಎಂಜಿನ್ ಹೊಂದಿರುವ ಕಾಂಗ್ರೆಸ್ನ ಪಕ್ಷಕ್ಕೆ ಕ್ಷುಲ್ಲಕ ರಾಜಕೀಯ, ಪ್ರತಿ ಹಂತದಲ್ಲೂ ಅಭಿವೃದ್ಧಿಗೆ ಅಡ್ಡಗಾಲು ಹಾಕುವುದೇ ಧ್ಯೇಯವಾಗಿದೆ ಎಂದು ಗೌರವ್ ಭಾಟಿಯಾ ಕಿಡಿಕಾರಿದರು
ಚುನಾವಣೆಗಾಗಿ ಸಜ್ಜುಗೊಳಿಸಲಾದ ಬಿಜೆಪಿಯ ಮಂಗಳೂರು ವಿಭಾಗದ ಮಾಧ್ಯಮ ಕೇಂದ್ರವನ್ನು ಉದ್ಘಾಟನೆಗೊಳಿಸಿ ರಾಷ್ಟ್ರೀಯ ಬಿಜೆಪಿ ವಕ್ತಾರರಾದ ಗೌರವ್ ಭಾಟಿಯಾ ಅವರು ಮಾತನಾಡಿದರು
ಬಿಜೆಪಿ ಅತ್ಯಂತ ರಚನಾತ್ಮಕ ಮತ್ತು ಪ್ರಜಾಸತ್ತಾತ್ಮಕ ಪಕ್ಷವಾಗಿದ್ದು, ವ್ಯವಸ್ಥಿತ ರೀತಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಇದಕ್ಕೆ ನಾನಾ ಹಂತದ ಪ್ರಕ್ರಿಯೆಗಳನ್ನು ನಡೆಸಲಾಗಿದ್ದು, ಶೀಘ್ರವೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಭಾಟಿಯಾ ತಿಳಿಸಿದರು.
ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿಯ ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಮತ್ತು ದ.ಕ ಜಿಲ್ಲಾ ಬಿಜೆಪಿ ಮುಖ್ಯ ವಕ್ತಾರ ಶಂಕರ ಮಿಜಾರು ಉಪಸ್ಥಿತರಿದ್ದರು