ಕುಂದಾಪುರ : ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ಮಂಜೂರು ಮಾಡುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.
ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯತ್ ಮತ್ತು 15 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶವಾಗಿದೆ. ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣದಲ್ಲಿ ಮುಂದಿರುವ ಉಡುಪಿ ಜಿಲ್ಲೆಗೆ ಸುಸಜ್ಜಿತವಾದ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದ್ದು ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ತಜ್ಞ ವೈದ್ಯರ ನೇಮಕ ನಡೆಯಲಿದೆ.
ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಸೇವೆ ಲಭ್ಯವಾಗಲಿದೆ. ಈ ಎಲ್ಲಾ ಕಾರಣಗಳಿಂದ ಉಡುಪಿ ಜನತೆಯ ಉತ್ತಮವಾದ ಆರೋಗ್ಯ ಸೇವೆಗಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತವಾದ ಸರಕಾರಿ ವೈದ್ಯಕೀಯ ಕಾಲೇಜ್ ಮಂಜೂರು ಮಾಡಬೇಕೆಂದು ಆರೋಗ್ಯ ಸಚಿವರಲ್ಲಿ ಸಂಸದ ಕೋಟ ವಿನಂತಿ ಮಾಡಿದರು.ಇದಕ್ಕೆ ಸ್ಪಂದಿಸಿದ ಸಚಿವರು ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ನೀಡುವುದರ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದರು.