ಕಾಪು : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್ 29 ರಂದು ಕುಂಜಿಬೆಟ್ಟು ಶಾರಾದಾ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ “ಕರಾವಳಿಯ ಸಾಹಿತಿಗಳು-ಕಲಾವಿದರು ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ” ಪೂರ್ವಭಾವಿಯಾಗಿ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ವಿಜಯ್ ಕೊಡವೂರು, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರವಿ ಕೋಟ್ಯಾನ್ ಪಡುಕೆರೆ, ಸುರೇಖಾ ಶೈಲೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.