ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರರವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು ಪ್ರಸ್ತುತ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು,ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆಹೊಳೆ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಕಿಶೋರ್ ಕುಮಾರ್ ಪುತ್ತೂರು, ಉಡುಪಿ ಜಿಲ್ಲಾಧಿಕಾರಿಯಾದ ಡಾ.ವಿದ್ಯಾ ಕುಮಾರಿ.ಕೆ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗಣಪತಿ ನಾಯಕ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು