ಉಡುಪಿ: ರಾಷ್ಟ್ರೀಯ ಹೆದ್ದಾರಿ 66,169 ಮತ್ತು 169A ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಮತ್ತು ಇದರ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಚರ್ಚಿಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ಪಡುಬಿದ್ರಿ ಜಂಕ್ಷನ್ ಬಳಿ ದಿನೇ ದಿನೇ ಅಪಘಾತ ಹೆಚ್ಚುತ್ತಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಗೆ ತಿರುಗುವಲ್ಲಿ ಸರ್ವಿಸ್ ರಸ್ತೆ ಸರಿಪಡಿಸುವಂತೆ ಕಟಪಾಡಿ ಜಂಕ್ಷನ್ ಬಳಿ ವಾಹನ ದಟ್ಟಣೆ ಮತ್ತು ಟ್ರಾಫಿಕ್ ಜಾಮ್ ಸಮಸ್ಯೆ ಆಗುತ್ತಿದ್ದು ಇದಕ್ಕೆ ಸೂಕ್ತ ಕ್ರಮ ವಹಿಸುವುದು ಮತ್ತು ರಾಷ್ಟ್ರೀಯ ಹೆದ್ದಾರಿ 169A ಸಂಭಂದಿಸಿದಂತೆ ಹಿರಿಯಡಕ, ಪೆರ್ಡೂರು ಪೇಟೆ ಭಾಗದಲ್ಲಿ ಕಾಮಗಾರಿ ವಿಳಂಬವಾಗೂತ್ತಿದ್ದು ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ನಡೆಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾl. ಅರುಣ್ ಕುಮಾರ್, ಸಹಾಯಕ ಆಯುಕ್ತರಾದ ರಶ್ಮಿ, ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.