324
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಇದರ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಫೆ.6 ಮಂಗಳವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.30ರವರೆಗೆ ಕುಂಜಿಬೆಟ್ಟುವಿನ ಶಾರದಾ ಕಲ್ಯಾಣ ಮಂಟಪದಲ್ಲಿ ಜರಗಲಿದೆ.
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಬೆಳಗ್ಗೆ 10 ಗಂಟೆಗೆ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾರ್ಗದರ್ಶನ ನೀಡಲಿದ್ದಾರೆ
ಈ ಸಭೆಯಲ್ಲಿ ಕೇಂದ್ರ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಮುಖಂಡರು ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

