ಸನ್ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ H D ದೇವೇಗೌಡರವರ ಉಪಸ್ಥಿತಿಯಲ್ಲಿ ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಭಾರತೀಯ ಜನತಾ ಪಾರ್ಟಿ ಹಾಗೂ ಜನತಾದಳ ಕಾರ್ಯಕರ್ತರ ಸಮಾವೇಶ ನಡೆಯಿತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ NDA ಅಭ್ಯರ್ಥಿ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸುವ ಮೂಲಕ, ಮತ್ತೊಮ್ಮೆ ಶ್ರೀ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯಾಗಿಸಿ ‘ವಿಕಸಿತ ಭಾರತ’ ಕನಸು ನನಸಾಗಿಸಲು ಸಹಕಾರ ನೀಡಬೇಕೆಂದು ವಿನಂತಿಸಿದರು.
ಈ ಸಭೆಯಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೆಗೌಡ ಅವರ ಜೊತೆ, ಭಾರತೀಯ ಜನತಾ ಪಾರ್ಟಿಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ವಿಧಾನಪರಿಷತ್ತಿನ ಉಪಸಭಾಪತಿಗಳಾದ ಶ್ರೀ MK ಪ್ರಾಣೇಶ್, ಸಕಲೇಶಪುರ ಶಾಸಕರಾದ ಶ್ರೀ ಸಿಮೆಂಟ್ ಮಂಜು , ಮಾಜಿ ಶಾಸಕರಾದ YSV ದತ್ತ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ದೇವರಾಜ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಂಜನ್ ಅಜಿತ್ ಕುಮಾರ್, ಬಿಜೆಪಿ ಮುಖಂಡರಾದ ಶ್ರೀ ದೀಪಕ್ ದೊಡ್ಡಯ್ಯ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬೋಜೆ ಗೌಡ, ಮೂಡಿಗೆರೆ ಮಂಡಲ ಅಧ್ಯಕ್ಷರಾದ ಶ್ರೀ ಗಜೇಂದ್ರ ಕೊಟ್ಟಿಗೆಹಾರ, ಅಲ್ದೂರು ಮಂಡಲ ಅಧ್ಯಕ್ಷರಾದ ಶ್ರೀ ರವಿ ಬಸವರಹಳ್ಳಿ, ಶ್ರೀ ಸುರೇಶ ಗೌಡ ಸೇರಿದಂತೆ ಉಭಯ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದರು.